ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಅದಮಾರು ಮಠದಿಂದ “ಶ್ರೀಕೃಷ್ಣ ಮುಖ್ಯಪ್ರಾಣ ಪ್ರಾಣರಕ್ಷಾ” ಆ್ಯಂಬುಲೆನ್ಸ್ ಹಸ್ತಾಂತರ

ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಅದಮಾರು ಮಠದ ವತಿಯಿಂದ ಕೋವಿಡ್ 19 ನಿರ್ವಹಿಸಲು ಜಿಲ್ಲಾಡಳಿತಕ್ಕೆ ನೆರವಾಗಲು ₹20 ವೆಚ್ಚದ “ಶ್ರೀಕೃಷ್ಣ ಮುಖ್ಯಪ್ರಾಣ ಪ್ರಾಣರಕ್ಷಾ” ಆ್ಯಂಬುಲೆನ್ಸ್ ವಾಹನವನ್ನು ಪರ್ಯಾಯ ಅದಮಾರು ಮಠಾಧೀಶರಾದ ಈಶಪ್ರಿಯತೀರ್ಥ ಸ್ವಾಮೀಜಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರಿಗೆ ಹಸ್ತಾಂತರಿಸಿದರು. ಪಲಿಮಾರು ಮಠಾಧೀಶರಾದ ವಿದ್ಯಾಧೀಶತೀರ್ಥ ಶ್ರೀಪಾದರು, ಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು, ಸೋದೆ ಮಠಾಧೀಶರಾದ ಶ್ರೀವಿಶ್ವವಲ್ಲಭತೀರ್ಥ ಶ್ರೀಪಾದರು, ಪಲಿಮಾರು ಕಿರಿಯ ಶ್ರೀಪಾದರಾದ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರು, ಶಿರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು, ಉಡುಪಿ […]