ಉಡುಪಿ: ವಾರದ ಹಿಂದೆ ನಾಪತ್ತೆಯಾಗಿದ್ದ ಲೆಕ್ಕಪರಿಶೋಧಕ ಶವವಾಗಿ ಪತ್ತೆ

ಉಡುಪಿ: ಕಳೆದ ಒಂದು ವಾರದ ಹಿಂದೆ ನಾಪತ್ತೆಯಾಗಿದ್ದ ಉಡುಪಿ ದೊಡ್ಡಣಗುಡ್ಡೆ ಕರಂಬಳ್ಳಿಯ 5ನೇ ರಸ್ತೆಯ ನಿವಾಸಿ ಸತೀಶ್ ಕುಮಾರ್ (54) ಅವರ ಮೃತದೇಹ ಮನೆಯ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿದೆ. ಅಗ್ನಿಶಾಮಕ ದಳದ ಸಹಾಯದಿಂದ ಮೃತದೇಹವನ್ನು ಮೇಲೆತ್ತಲಾಗಿದೆ. ವ್ಯಕ್ತಿ ಒಂದು ವಾರದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಶವವನ್ನು ವೈದ್ಯಕೀಯ ಪರೀಕ್ಷೆಗಾಗಿ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು, ಉಚಿತ ಅಂಬುಲೇನ್ಸ್ ಸೇವೆಯನ್ನು ಒದಗಿಸಿ ಇಲಾಖೆಗೆ ಸಹಕರಿಸಿದರು. ಮಣಿಪಾಲ […]