ಉಡುಪಿ: ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಉಡುಪಿ: ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2019-20 ಹಾಗೂ 2020-21ನೇ ಸಾಲಿನಲ್ಲಿ ನಡೆದ ಸಿಬಿಎಸ್ಸಿ , ಐಸಿಎಸ್ಸಿ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಶೇ. 60ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ₹7,000 ಹಾಗೂ ಶೇ.75 ಕ್ಕಿಂತಲು ಹೆಚ್ಚು ಅಂಕಗಳನ್ನು ಪಡೆದ ವಿದ್ಯಾಥಿಗಳಿಗೆ ₹15,000 ಪ್ರೋತ್ಸಾಹಧನ ನೀಡಲಾಗುವುದು. ಅರ್ಹ ಅಭ್ಯರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ಇಲಾಖಾ ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಿ ಅಪ್ಡೇಟ್ ಮಾಡಿಸಲು ತಮ್ಮ ತಾಲೂಕು ವ್ಯಾಪ್ತಿಯ ಸಮಾಜ […]