ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಂದ ಧರಣಿ
ಉಡುಪಿ: ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘದ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇಂದು ಧರಣಿ ನಡೆಸಿದರು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಸರಕಾರದ ವಿರುದ್ಧ ದಿಕ್ಕಾರ ಕೂಗಿದರು. ಅಂಗನವಾಡಿ ನೌಕರರನ್ನು ಸರಕಾರವು ಸಾಮಾಜಿಕ ಮತ್ತು ಆರ್ಥಿಕ ಭದ್ರತೆಯನ್ನು ಒದಗಿಸದೆ ಕೇವಲ ದುಡುಮೆಗಾಗಿ ಬಳಸಿಕೊಂಡು ಶೋಷಣೆ ಮಾಡುತ್ತಿದೆ ಎಂದು […]