ಉಡುಪಿ:ಅನ್ನಭಾಗ್ಯ ಯೋಜನೆ : ನಗದು ವರ್ಗಾವಣೆ ಬದಲಾಗಿ ಅಕ್ಕಿ ವಿತರಣೆ

ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಲ್ಲಿ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿರುವ ಪ್ರತಿ ಸದಸ್ಯರಿಗೆ ಪ್ರತಿ ಮಾಹೆಯಲ್ಲಿ 10 ಕೆ.ಜಿ ಅಕ್ಕಿ ದೊರಕಬೇಕೆಂಬ ಉದ್ದೇಶದಿಂದ ಜುಲೈ2023 ರ ಮಾಹೆಯಿಂದ ನೀಡಲಾಗುತ್ತಿದ್ದ ನಗದು ವರ್ಗಾವಣೆಯ ಬದಲಾಗಿ ಪ್ರತಿ ಮಾಹೆಯಲ್ಲಿ ಎನ್.ಎಫ್.ಎಸ್.ಎ ಯೋಜನೆಯ ಅಕ್ಕಿಹಂಚಿಕೆಯೊಂದಿಗೆ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿಯನ್ನು ಫೆಬ್ರವರಿ ತಿಂಗಳಿಂದ ಅನ್ವಯವಾಗುವಂತೆ ಮಾರ್ಚ್ ತಿಂಗಳಿಂದನೀಡಲಾಗುತ್ತದೆ. ಅದರಂತೆ ಮಾರ್ಚ್ ತಿಂಗಳಲ್ಲಿ ಆದ್ಯತಾ ಪಡಿತರ ಚೀಟಿ ಹೊಂದಿರುವ ಪ್ರತಿ ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ […]