ಉಡುಪಿ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಉಡುಪಿ: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://ambigaradevelopment.karnataka.gov.inಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ(ನಿ), ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ : 0820-2574882 ಅನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಉಡುಪಿ: ಜಿಲ್ಲಾ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 2022 ಜನವರಿ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.karnataka.gov.in/dbcdc ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574882 ಅನ್ನು […]
ಉಡುಪಿ: ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್‌ರು ಮತ್ತು ಪಾರ್ಸಿ ಜನಾಂಗದವರಿಂದ ಶ್ರಮಶಕ್ತಿ , ಸಣ್ಣ ಸಾಲ (ಮೈಕ್ರೋ ಕ್ರೆಡಿಟ್), ಮಹಿಳೆಯರಿಗೆ ಮೈಕ್ರೋ ಸಾಲ (ವೈಯಕ್ತಿಕ), ಗಂಗಾಕಲ್ಯಾಣ ಹಾಗೂ ಟ್ಯಾಕ್ಸಿ/ಗೂಡ್ಸ್/ಆಟೋರಿಕ್ಷಾ ವಾಹನ ಖರೀದಿ ಸಹಾಯಧನ ಯೋಜನೆಗಳಿಗೆ 80:10:10 ಅನುಪಾತದಲ್ಲಿ ಅಂದರೆ ಶೇ. 80ರಷ್ಟು ಮುಸ್ಲಿಂ, ಶೇ. 10ರಷ್ಟು ಕ್ರೈಸ್ತರು ಹಾಗೂ ಶೇ. 10ರಷ್ಟು ಇತರರಿಗೆ ಸಾಲ ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. […]
ಉಡುಪಿ: ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಉಡುಪಿ: ಪ್ರಸಕ್ತ ಸಾಲಿನ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಭೋವಿ ಜನಾಂಗದವರಿಗೆ, ಸ್ವಯಂ ಉದ್ಯೋಗ, ನೇರಸಾಲ, ಉದ್ಯಮಶೀಲತಾ ಅಭಿವೃದ್ಧಿ, ಮೈಕ್ರೋ ಕ್ರೆಡಿಟ್ ಹಾಗೂ ಗಂಗಾ ಕಲ್ಯಾಣ ಯೋಜನೆ , ಭೂ ಒಡೆತನ ಯೋಜನೆ, ಸಾಲ ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಧಿಕೃತ ವೆಬ್‌ಸೈಟ್ https://kbdc.karnataka.gov.in ನಲ್ಲಿ ಅಕ್ಟೋಬರ್ 14 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ, 0820-2574884 ನ್ನು ಸಂಪರ್ಕಿಸುವಂತೆ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.