ಉಡುಪಿ:ಅರ್ಜಿ ಆಹ್ವಾನ

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಖರಣ ಇಲಾಖೆಯ ವತಿಯಿಂದ ಪಾಲಕರ ಪೋಷಣೆ,ಸಂರಕ್ಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣಾ ಕಾಯ್ದೆ- 2007 ಮತ್ತು ಅಧಿನಿಯಮ- 2009 ರನ್ವಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಬೇಕಾಗಿರುತ್ತದೆ. ಈ ಸಭೆಗೆ ಪದಾಧಿಕಾರಿಗಳ ಆಯ್ಕೆಯಲ್ಲಿ ಇಬ್ಬರು ಹಿರಿಯ ನಾಗರಿಕರನ್ನು ನಾಮನಿರ್ದೇಶನ ಮಾಡಲು ಅರ್ಹ ಹಿರಿಯ ನಾಗರಿಕರಿಂದ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಇಬ್ಬರು ಸ್ವಯಂಸೇವಾ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಆಸಕ್ತಸ್ವಯಂಸೇವಾ ಪ್ರತಿನಿಧಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 14 ಕೊನೆಯ ದಿನ. […]