ಉಡುಪಿ: ಮೇ 3 ರಂದು ನೇರ ಸಂದರ್ಶನ

ಉಡುಪಿ: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಮೂಲಕ ಸಂಜೀವಿನಿ ಸ್ವ ಸಹಾಯ ಗುಂಪುಗಳ ಸದಸ್ಯೆಯರನ್ನು ಹೋಟೆಲ್ ಉದ್ದಿಮೆಯಲ್ಲಿ ತೊಡಗಿಸಿ, ಅವರ ಸ್ವಾವಲಂಬಿ ಜೀವನಕ್ಕೆ ನೆರವಾಗುವ ಉದ್ದೇಶದಿಂದ ‘ಅಕ್ಕಾ ಕೆಫೆ’ ಯೋಜನೆಯನ್ನು ಜಿಲ್ಲೆಯಲ್ಲಿ ಪ್ರಾರಂಭಿಸಲಾಗುತ್ತಿದೆ. ಮೊದಲ ಹಂತವಾಗಿ ಅಕ್ಕಾ ಕೆಫೆಯನ್ನು ಮಣಿಪಾಲ ರಜತಾದ್ರಿಯ ಜಿಲ್ಲಾಡಳಿತ ಕಚೇರಿ ಸಂಕೀರ್ಣದಲ್ಲಿ ಪ್ರಾರಂಭಿಸಲು ‘ಉದ್ದೇಶಿಸಲಾಗಿದ್ದು, ಇದನ್ನು ನಿರ್ವಹಿಸಲು ಅರ್ಹ ಆಸಕ್ತ ಸಂಜೀವಿನಿ ಗುಂಪುಗಳಿಗೆ ಮೇ 3 ರಂದು ಜಿಲ್ಲಾ ಪಂಚಾಯತ್‌ನಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ. ಗ್ರಾಮೀಣ/ನಗರ ಸಂಜೀವಿನಿ ಸ್ವಸಹಾಯ ಗುಂಪುಗಳಾಗಿರುವ, ಈಗಾಗಲೇ ಹೋಟೆಲ್ […]