ಉಡುಪಿ:ಅಪ್ರೆಂಟಿಸ್ ತರಬೇತಿ: ಪತ್ರಿಕೋದ್ಯಮ ಪದವೀಧರರಿಂದ ಅರ್ಜಿ ಆಹ್ವಾನ

ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಶೇಷ ಘಟಕಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಹ ಪತ್ರಿಕೋಧ್ಯಮ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಉಡುಪಿ ಜಿಲ್ಲಾ ಕಚೇರಿಗೆ 2024-25 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‌ಗೆ ತರಬೇತಿ […]