ಉಡುಪಿ: ಸರಕಾರಿ ಉದ್ಯೋಗ ಕೊಡಿಸುವುದಾಗಿ ವಂಚಿಸುತ್ತಿದ್ದ ಖದೀಮನ ಬಂಧನ
ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಪರಿಚಯ ಮಾಡಿಕೊಂಡು ಸರಕಾರಿ ಉದ್ಯೋಗ ಮಾಡಿಕೊಡಿಸುವುದಾಗಿ ನಂಬಿಸಿ ವಂಚಿಸುತ್ತಿದ್ದ ಖದೀಮನೊಬ್ಬನನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ್ದು, ಆತನಿಂದ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಕಾಪು ಉಳಿಯಾರಗೋಳಿ ನಿವಾಸಿ ನಿಶಾಂತ ಎಸ್. ಕುಮಾರ್ ಯಾನೆ ನಿತಿನ್ (21) ಎಂದು ಗುರುತಿಸಲಾಗಿದೆ. ಈತ ಫೇಸ್ ಬುಕ್‌ನಲ್ಲಿ ಪರಿಚಯ ಮಾಡಿಕೊಂಡು ಸರಕಾರಿ ಉದ್ಯೋಗ ದೊರಕಿಸಿಕೊಡುವುದಾಗಿ ನಂಬಿಸಿ ಹಲವಾರು ಮಂದಿಯಿಂದ ಹಣ ಸುಲಿಗೆ ಮಾಡುತ್ತಿದ್ದ. ನಿಶಾಂತ್ ವರ್ತನೆಯಲ್ಲಿ ಸಂಶಯಗೊಂಡ ನಿರುದ್ಯೋಗಿಯೊಬ್ಬರು ಉಡುಪಿ ಸೆನ್ ಠಾಣೆಗೆ […]