ಉಡುಪಿ ಕೃಷ್ಣಮಠದಲ್ಲಿ ಅಷ್ಟಮಿ ಹಬ್ಬದ ತಯಾರಿ ಜೋರು

ಉಡುಪಿ: ಆಗಸ್ಟ್ 26ರಂದು ನಡೆಯಲಿರುವ ಶ್ರೀಕೃಷ್ಣ ಜನ್ಮಾಷ್ಟಮಿಗೆ ಕೃಷ್ಣ ನಗರಿ ಸಜ್ಜುಗೊಳ್ಳುತ್ತಿದೆ. ವಿಶೇಷವಾಗಿ ಕೃಷ್ಣ ಮಠವನ್ನೊಳಗೊಂಡ ಅಷ್ಟಮಠಗಳಲ್ಲಿ ತಯಾರಿ ಭರದಿಂದ ಸಾಗಿದ್ದು, ಹಬ್ಬದ ಕಳೆ ಬಂದಿದೆ. ಸೋಮವಾರ ವಿವಿಧ ಕಾರ್ಯಕ್ರಮಗಳು ಮತ್ತು ರಾತ್ರಿ ಅಘ್ರ್ಯ ಪ್ರಧಾನ ಇದ್ದರೆ, ಮರುದಿನ ಮಂಗಳವಾರ ವಿಟ್ಲಪಿಂಡಿ ಉತ್ಸವ ನಡೆಯಲಿದ್ದು ಹಬ್ಬ ಪರಾಕಾಷ್ಟೆ ತಲುಪಲಿದೆ.ಈ ಪ್ರಯುಕ್ತ ಕೃಷ್ಣ ಮಠದಲ್ಲಿ ಭಕ್ತರಿಗಾಗಿ ವಿತರಿಸಲು ಸಾವಿರಾರು ಚಕ್ಕುಲಿ -ಉಂಡೆಪ್ರಸಾದ ತಯಾರಿಸಲಾಗುತ್ತಿದೆ. ಉಂಡೆ ಚಕ್ಕುಲಿ ಪ್ರಸಾದವನ್ನು ಕೃಷ್ಣನಿಗೆ ಅರ್ಪಿಸಿದ ಬಳಿಕ ಭಕ್ತರಿಗೆ ವಿತರಿಸಲಾಗುತ್ತಿದೆ.ಕಡೆಗೋಲು ಕೃಷ್ಣನಿಗೆ ಪ್ರಿಯವಾದ ಉಂಡೆ […]