ಉಡುಪಿ:ಜಾಗೃತಿ ವಹಿಸುವುದರಿಂದ ಮಾತ್ರ ಹೆಚ್.ಐ.ವಿ ಯಿಂದ ದೂರವಿರಲು ಸಾಧ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಜನಸಾಮಾನ್ಯರು ಹೆಚ್.ಐ.ವಿ ರೋಗದ ಹರಡುವಿಕೆ, ಅದರಿಂದಾಗುವ ಉಂಟಾಗುವ ಪರಿಣಾಮಗಳಬಗ್ಗೆ ಅರಿವು ಹೊಂದಿ, ಅಗತ್ಯ ಎಲ್ಲಾ ರೀತಿಯಲ್ಲಿ ಮುನ್ನೆಚ್ಚರಿಕೆಯನ್ನು ವಹಿಸಿದ್ದಲ್ಲಿ ಮಾತ್ರ ಈ ರೋಗದಿಂದ ದೂರವಿರಲು ಸಾಧ್ಯ.ಇದಕ್ಕೆ ಪ್ರತಿಯೊಬ್ಬರೂ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಸೋಮವಾರ ನಗರದ ಅಂಬಲಪಾಡಿ ಪ್ರಗತಿಸೌಧ ರಾಷ್ಟ್ರೀಯ ಸ್ವ-ಸಹಾಯ ಸಂಘ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, […]