ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ: ಮೇ 10ರಿಂದ ಮಧ್ಯಾಹ್ನದವರೆಗೆ ಮಾತ್ರ ಸೊಸೈಟಿಯ ವ್ಯವಹಾರ
ಉಡುಪಿ: ಕೋವಿಡ್ ಹಿನ್ನೆಲೆಯಲ್ಲಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಪ್ರಧಾನ ಕಚೇರಿ ಹಾಗೂ ಎಲ್ಲಾ ಶಾಖೆಗಳಲ್ಲಿ ಮೇ 10ರಿಂದ ಬೆಳಿಗ್ಗೆ 8.30ರಿಂದ ಮಧ್ಯಾಹ್ನ 1.30ರ ವರೆಗೆ ಮಾತ್ರ ವ್ಯವಹಾರ ನಡೆಯಲಿದೆ ಎಂದು ಸೊಸೈಟಿಯ ಆಡಳಿತ ಮಂಡಳಿ ತಿಳಿಸಿದೆ. ಈ ನಿಯಮ ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ. ಹೀಗಾಗಿ ಬ್ಯಾಂಕ್ ನ ಗ್ರಾಹಕರು ಈ ಕಾಲಾಮಿತಿಯೊಳಗೆ ತಮ್ಮ ವ್ಯವಹಾರಗಳನ್ನು ಪೂರೈಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.