ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ.: ಉಡುಪಿ ಸಂಘದ ಸಿಬ್ಬಂದಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ

ಉಡುಪಿ: ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸಿಬ್ಬಂದಿಗಳಿಗೆ ಸೊಸೈಟಿಯ ವತಿಯಿಂದ ಒಂದು ದಿನದ ವಿಶೇಷ ತರಬೇತಿ ಕಾರ್ಯಾಗಾರವು ಉಡುಪಿ ನಗರದ ಹೋಟೆಲ್ ಡಯಾನ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಮಂಗಳೂರಿನ ಹೆಸರಾಂತ ತರಬೇತಿ ಸಂಸ್ಥೆಯಾದ ಮಾಸ್ಟರ್‌ಮೈಂಡ್ ಎಂಟರ್ ಪ್ರೈಸಸ್ ನ ಶ್ರೀಶ ಕೆ.ಎಂ ಇವರು ಸಂಘದ ಸಿಬ್ಬಂದಿಗಳಿಗೆ ತರಬೇತಿ ನೀಡಿದರು. ಸಂಘದ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿಯವರುಕಾರ್ಯಕ್ರಮ ಉದ್ಘಾಟಿಸಿ ಗ್ರಾಹಕರೇ ನಮ್ಮ ದೇವರು. ಆಧುನಿಕ ಬದಲಾವಣೆಗಳಿಗೆ ಒಗ್ಗಿಕೊಂಡು ಒತ್ತಡ ನಿರ್ವಹಣೆ,ಕೌಶಲ್ಯಾಭಿವೃದ್ಧಿಯೊಂದಿಗೆ ಗ್ರಾಹಕರಿಗೆ ನಗುಮುಖದ ಉತ್ತಮಸೇವೆ ನೀಡುವರೇ ಇಂತಹ […]