ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ‘ಬಕ್ರೀದ್ ಹಬ್ಬ’ ಆಚರಣೆ

ಉಡುಪಿ: ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಅಝಾ(ಬಕ್ರೀದ್) ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಿದರು. ಉಡುಪಿ ನಗರ ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ಮುಸ್ಲಿಮರು ಬೆಳಗ್ಗೆ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಝ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಝ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಉಡುಪಿ ಜಾಮೀಯ ಮಸೀದಿಯಲ್ಲಿ ಮೌಲಾನಾ […]