ಏಕಬಳಕೆ ಪ್ಲಾಸ್ಟಿಕ್ ನಿಷೇಧದ ಅಧಿಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ

ಉಡುಪಿ: ನಗರಸಭೆಯ ವ್ಯಾಪ್ತಿಯಲ್ಲಿ ಏಕಬಳಕೆಯ ಪ್ಲಾಸ್ಟಿಕ್ ನಿಷೇಧದ ಅಧಿಸೂಚನೆಯನ್ನು ಕಟ್ಟುನಿಟ್ಟಾಗಿಪಾಲಿಸುವಂತೆ ಸರಕಾರ ಆದೇಶಿಸಿದ್ದು, ಏಕ ಬಳಕೆಯ ಪ್ಲಾಸ್ಟಿಕ್‌ನ್ನು ಕಟ್ಟುನಿಟ್ಟಾಗಿ ನಿಷೇಧಿಸುವ ಸಲುವಾಗಿ ನಿಷೇಧಿತ ಪ್ಲಾಸ್ಟಿಕ್ ಸಾಮಾಗ್ರಿಗಳ ಮಾರಾಟದ ಮೇಲೆ ಮೊದಲು 500 ರೂ. ದಂಡ ಹಾಗೂ 2ನೇ ಬಾರಿಗೆ 1000 ರೂ ದಂಡ ವಿಧಿಸಲಾಗುವುದು. ಆ ನಂತರವೂಪ್ಲಾಸ್ಟಿಕ್ ಮಾರಾಟ ಕಂಡು ಬಂದಲ್ಲಿ ಅಂತಹ ಉದ್ದಿಮೆಯ ಪರವಾನಿಗೆಯನ್ನು ರದ್ದುಪಡಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ನಿಷೇಧಿತ ಪ್ಲಾಸ್ಟಿಕ್‌ನ್ನು ಅಕ್ರಮವಾಗಿ ದಾಸ್ತಾನು ಪಡಿಸಿದ್ದಲ್ಲಿ 1 ಕೆ.ಜಿ ವರೆಗಿನ ಪ್ಲಾಸ್ಟಿಕ್ ತ್ಯಾಜ್ಯಕ್ಕೆ […]