ಯುವನಿಧಿ ಯೋಜನೆ: ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ

ಉಡುಪಿ: ರಾಜ್ಯ ಸರಕಾರದ ಯುವನಿಧಿ ಯೋಜನೆಗೆ ನೋಂದಣಿ ಚಾಲ್ತಿಯಲ್ಲಿದ್ದು, ಅರ್ಹರು ಸೇವಾ ಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ನೋಂದಣಿಮಾಡಿಕೊಳ್ಳಬಹುದಾಗಿದೆ. 2022-23 ನೇ ಹಾಗೂ ಅನಂತರದ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ (ವೃತ್ತಿಪರ ಸೇರಿದಂತೆ) ಹಾಗೂ ಯಾವುದೇ ಡಿಪ್ಲೋಮಾ ಪಡೆದು ನಿರುದ್ಯೋಗಿ ಯಾಗಿರುವವರು ಯುವನಿಧಿ ಯೋಜನೆಯ ಮೂಲಕ ಪ್ರತಿ ತಿಂಗಳು ಪದವೀಧರ ನಿರುದ್ಯೋಗಿಗಳಿಗೆ ರೂ 3,000 ಹಾಗೂ ಡಿಪ್ಲೋಮಾ ಪಡೆದ ನಿರುದ್ಯೋಗಿ ಗಳಿಗೆ ರೂ.1,500 ನೇರ ನಗದು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು. ಪ್ರತಿ ತಿಂಗಳು ಸ್ವಯಂ ಘೋಷಣೆ […]