ಸೀಟು ವಂಚಿತ: ಎಂಬಿಬಿಎಸ್ ವಿದ್ಯಾರ್ಥಿಗೆ 10ಲಕ್ಷ ರೂ. ಪರಿಹಾರ ಪಾವತಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ.
ಬೆಂಗಳೂರು: ಎಂಬಿಬಿಎಸ್ ವಿದ್ಯಾರ್ಥಿಗೆ ಕ್ರೀಡಾ ಕೋಟಾದ ಬದಲು ಖಾಸಗಿ ಸೀಟಿಗೆ ತಪ್ಪಾಗಿ ವರ್ಗೀಕರಿಸಿದ್ದರಿಂದ ಆಗಿರುವ ನಷ್ಟ ಸರಿದೂಗಿಸಲು 10 ಲಕ್ಷ ರೂ. ಪರಿಹಾರ ಪಾವತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನಗರದ ಎಚ್‌ಎಸ್‌ಆರ್ ಲೇಔಟ್‌ನ ಚೆಸ್ ಆಟಗಾರ್ತಿ ಸಂಜನಾ ರಘುನಾಥ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆವಿ ಅರವಿಂದ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಅರ್ಜಿದಾರರು ವರ್ಷಕ್ಕೆ ಸರಿ ಸುಮಾರು 11,88,000 ರೂ.ಗಳನ್ನು ಪಾವತಿಸಿದ್ದಾರೆ. […]