ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ ವಿಧಿವಶ.
ಬೆಂಗಳೂರು: ಹಿರಿಯ ಪತ್ರಕರ್ತ ಹಾಗೂ ಸಂಯುಕ್ತ ಕರ್ನಾಟಕದ ಸಂಪಾದಕ ವಸಂತ ನಾಡಿಗೇರ ಅವರು ಸೋಮವಾರ (ಸೆ.09) ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ನಿಧನರಾದರು. ನಾಡಿಗೇರ ಅವರು ಪತ್ನಿ, ಪುತ್ರ ಹಾಗೂ ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೂರುವರೆ ದಶಕಗಳ ಕಾಲ ಕನ್ನಡ ಪತ್ರಿಕೋದ್ಯಮದಲ್ಲಿ ವಿಶೇಷ ಸೇವೆ ಸಲ್ಲಿಸಿದ್ದಾರೆ. ತಮ್ಮ ವಿಶಿಷ್ಟ ಮಾತಿನ ಶೈಲಿ ಹಾಗೂ ವಿಭಿನ್ನ ಹೆಡ್ಲೈನ್ಗಳ ಮೂಲಕವೇ ಪತ್ರಿಕೋದ್ಯಮದಲ್ಲಿ ಖ್ಯಾತಿ ಗಳಿಸಿದ್ದರು. ವಸಂತ್ ಸರ್ ಎಂದೇ ಸುದ್ದಿಮನೆಗಳಲ್ಲಿ ಪ್ರಸಿದ್ಧರಾಗಿದ್ದರು.ವಿಜಯಕರ್ನಾಟಕ ಹಾಗೂ ವಿಶ್ವವಾಣಿ ನಂತರ ಕಳೆದ […]