ಉಡುಪಿ: ತಿರುಪತಿ ಲಡ್ಡು ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿಯವರು ಸೂಕ್ತ ತನಿಖೆ ನಡೆಸಿ: ರಮೇಶ್ ಕಾಂಚನ್ ಆಗ್ರಹ
ಉಡುಪಿ: ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಯ ಕೊಬ್ಬು ಪತ್ತೆಯಾಗಿರುವ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಸೂಕ್ತ ತನಿಖೆ ನಡೆಸಿ ದೇಶದ ಜನತೆಗೆ ಸತ್ಯ ತಿಳಿಸಬೇಕು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಆಗ್ರಹಿಸಿದ್ದಾರೆ. ದೇಶದಲ್ಲಿ ದೊಡ್ಡ ಮಟ್ಟದ ಕೋಲಾಹಲಕ್ಕೆ ಹಾಗೂ ಹಿಂದೂ ಭಕ್ತರ ಭಾವನೆಗಳಿಗೆ ಧಕ್ಕೆಯಾಗುವಂತ ವಿಚಾರ ಚರ್ಚೆಯಾಗುತ್ತಿದ್ದು ಕಳೆದ ಎರಡು ಅವಧಿಯಲ್ಲಿ ಎನ್.ಡಿ.ಎ ಮಿತ್ರಪಕ್ಷವಾಗಿರುವ ವೈ.ಎಸ್.ಆರ್ ಪಕ್ಷದಿಂದ ಮುಖ್ಯಮಂತ್ರಿಯಾಗಿದ್ದ […]