ಬ್ಯಾಂಕಿನ ಮ್ಯಾನೆಜರ್‌ಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿ, ಜನರಿಗೆ ಉತ್ತಮ ಸೇವೆ ನೀಡಿ: ಜಿ.ಪಂ ಸಿ.ಇ.ಓ ಪ್ರತೀಕ್ ಬಾಯಲ್

ಉಡುಪಿ: ಬ್ಯಾಂಕ್‌ಗಳ ಮ್ಯಾನೆಜರ್‌ಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿದ್ದಲ್ಲಿ ಜನಸಾಮಾನ್ಯರ ದೈನಂದಿನ ಬ್ಯಾಂಕಿ೦ಗ್ ವ್ಯವಹಾರದಲ್ಲಿ ಉತ್ತಮ ಸೇವೆಯನ್ನು ಒದಗಿಸಲು ಸಾಧ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ತಿಳಿಸಿದರು.ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಬ್ಯಾಂಕಿನ ವ್ಯವಹಾರಗಳು ಸುಲಭವಾಗಿ ಸಾರ್ವಜನಿಕರಿಗೆ ಲಭ್ಯವಾಗಲು ಹಾಗೂ ವಿವಿಧ ಅಭಿವೃದ್ಧಿ ಚಟುವಟಿಕೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸಮನ್ವಯವನ್ನು ಸುಲಭಗೊಳಿಸಲು ಬ್ಯಾಂಕ್‌ಗಳು, ಸರ್ಕಾರಿ […]