ಉಡುಪಿ: ಬ್ಯಾಂಕ್’ಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚೆಕ್ ಕಳವು.
ಉಡುಪಿ: ಭಾರತೀಯ ಸ್ಟೇಟ್ ಬ್ಯಾಂಕ್ ಸಂತೆಕಟ್ಟೆ ಶಾಖೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚೆಕ್ ಕಳವು ಮಾಡಿರುವ ಘಟನೆ ಜೂ.20ರಂದು ರಾತ್ರಿ ವೇಳೆ ನಡೆದಿದೆ. ಶಾಖೆಯ ಕಿಟಕಿಯ ಸರಳನ್ನು ಕತ್ತರಿಸಿ ಒಳನುಗ್ಗಿದ ಕಳ್ಳರು, ಕಚೇರಿಯಲ್ಲಿದ್ದ 2,50,000ರೂ. ಮೌಲ್ಯದ ಚೆಕ್‌ನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.