ಉಡುಪಿ:ಜನಸಾಮಾನ್ಯರೊಂದಿಗೆ ಬ್ಯಾಂಕ್‌ನ ಅಧಿಕಾರಿ ಹಾಗೂ ಸಿಬ್ಬಂದಿಗಳು ಸ್ಥಳೀಯ ಭಾಷೆಯಲ್ಲಿ ವ್ಯವಹರಿಸಿ : ಜಿಲ್ಲಾ ಪಂಚಾಯತ್ ಸಿ.ಇ.ಓ ಪ್ರತೀಕ್ ಬಾಯಲ್

ಉಡುಪಿ: ಜನಸಾಮಾನ್ಯರು ತಮ್ಮ ದೈನಂದಿನ ವ್ಯವಹಾರಗಳಿಗೆ ಬ್ಯಾಂಕುಗಳಿಗೆ ಬಂದಾಗ ಬ್ಯಾಂಕ್‌ನ ಅಧಿಕಾರಿ ಹಾಗೂ ಸಿಬ್ಬಂದಿಗಳು ಸ್ಥಳೀಯ ಭಾಷೆಯಲ್ಲಿ ವ್ಯವಹರಿಸಿ, ಅವರುಗಳಿಗೆ ಯಾವುದೇ ಗೊಂದಲವಾಗದ ರೀತಿಯಲ್ಲಿ ಪೂರಕ ವಾತಾವರಣ ಕಲ್ಪಿಸಿದಾಗ ಬ್ಯಾಂಕಿನ ವ್ಯವಹಾರಗಳು ಮತ್ತಷ್ಟು ಅಭಿವೃದ್ಧಿಗೊಳ್ಳಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. […]