ಬಂಟಕಲ್:ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

ಉಡುಪಿ, ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕಮಹಾವಿದ್ಯಾಲಯದ ಪ್ರಸಕ್ತ ಸಾಲಿನ ಪ್ರಥಮ ವರ್ಷದ ಇಂಜಿನಿಯರಿಂಗ್ ಶಿಕ್ಷಣಕ್ಕೆ ಸೇರ್ಪಡೆಗೊಂಡ ವಿದ್ಯಾರ್ಥಿಗಳ ‘ಮಾರ್ಗದರ್ಶನ ಕಾರ್ಯಕ್ರಮ’ವು ದಿನಾಂಕ 05 ಅಕ್ಟೋಬರ್ 2025ರ ಭಾನುವಾರದಂದು ವಿದ್ಯಾಲಯದ ಆವರಣದಲ್ಲಿ ಯಶಸ್ವಿಯಾಗಿ ಜರುಗಿತು. ಉಡುಪಿ ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ದೀಪ ಬೆಳಗಿಸುವ ಮೂಲಕಕಾರ್ಯಕ್ರಮವನ್ನು ಉದ್ಘಾಟಿಸಿದರು ಮತ್ತು ಸಮಾರಂಭದಅಧ್ಯಕ್ಷತೆ ವಹಿಸಿದ್ದರು. ಅವರು ತಮ್ಮ ಆಶೀರ್ವಚನದಲ್ಲಿ ವಿದ್ಯಾರ್ಥಿಗಳುತಮ್ಮ ಆಸಕ್ತಿಯ ಕ್ಷೇತ್ರದ ಮೇಲೆ ಗಮನವನ್ನು ಕೇಂದ್ರೀಕರಿಸಿವೃತ್ತಿ ಜೀವನದಲ್ಲಿ ಶ್ರೇಷ್ಠತೆಯನ್ನು […]