ಉಡುಪಿ ವಕೀಲರ ಸಂಘ: ರಾಜ್ಯಮಟ್ಟ ಕ್ರೀಡಾಕೂಟದ ಟ್ರೋಫಿ ಅನಾವರಣ

ಉಡುಪಿ: ಉಡುಪಿ ವಕೀಲರ ಸಂಘ ಮತ್ತು ನ್ಯಾಯಾಲಯದ 125 ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಎಮ್‌ಜಿಎಮ್ ಮೈದಾನದಲ್ಲಿ ಮಾ.1 ಮತ್ತು 2ರಂದು ಆಯೋಜಿಸಿರುವ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರೀಡಾಕೂಟದ ಟ್ರೋಫಿಯನ್ನು ಸೋಮವಾರ ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶರಾದ ಕಿರಣ್ ಎಸ್. ಗಂಗಣ್ಣನವರ್ ಅನಾವರಣಗೊಳಿಸಿದರು. ಆ ಬಳಿಕ ಮಾತನಾಡಿದ ಅವರು, ಪ್ರತಿಭೆಗಳ ಅನಾವರಣಕ್ಕೆ ಕ್ರೀಡಾಕೂಟ ಸಹಕಾರಿ. ಉಡುಪಿ ವಕೀಲರ ಸಂಘದ ಚಟುವಟಿಕೆಗಳಿಗೆ ಉತ್ತಮ ಪ್ರೋತ್ಸಾಹ ದೊರಕಿದೆ. ಸಮಾಜಮುಖಿ ಕಾರ್ಯದಲ್ಲಿ ಮುಂದಿರುವ ಉಡುಪಿ ವಕೀಲರ […]