ಬಾರ್ಕೂರು ನೇಶನಲ್ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ.
ಬ್ರಹ್ಮಾವರ: ದಿ ಬಾರ್ಕೂರು ಎಜುಕೇಶನಲ್ ಸೊಸೈಟಿಯ ಆಡಳಿತಕ್ಕೆ ಒಳಪಟ್ಟ ನೇಶನಲ್ ಐಟಿಐನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಸಂಚಾಲಕರಾದ ಶ್ರೀ ಬಿ. ರಾಮಚಂದ್ರ ಕಾಮತ್ ರವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರುಗಳನ್ನು ನೆನಪಿಸಿಕೊಳ್ಳುತ್ತಾ ಇತ್ತೀಚೆಗೆ ನೆರೆ ರಾಷ್ಟ್ರದಲ್ಲಿ ನಡೆದ ಕೋಮು ಗಲಭೆಯನ್ನು ಪ್ರಸ್ತಾಪಿಸಿ, ಎಲ್ಲರೂ ಒಟ್ಟಾಗಿ ಸಾಮರಸ್ಯದಿಂದ ಬಾಳಿ ಸತ್ಪಪ್ರಜೆಗಳಾಗಿ ಬಾಳಬೇಕೆಂದು ತಿಳಿಸಿದರು. ಸಂಸ್ಥೆಯ ಪ್ರಾಚಾರ್ಯರು ಮಾತನಾಡುತ್ತಾ ನಾವೆಲ್ಲರೂ ಶಾಂತಿಯುತವಾಗಿ ಒಂದಾಗಿ ಬಾಳೋಣ ಎಂದು ತಿಳಿಸಿದರು. ಸಂಸ್ಥೆಯ ಎಲ್ಲ ಬೋಧಕ […]