ಉಡುಪಿ: ಶಿವಶರಣರ ವಚನ ಸಾಹಿತ್ಯದಿಂದ ಸಮಾಜ ಸುಧಾರಣೆ: ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್
ಉಡುಪಿ: ಶಿವಶರಣರು ರಚಿಸಿದ ವಚನ ಸಾಹಿತ್ಯಗಳು ಬರೀ ಸಾಮಾಜಿಕವಾಗಿ ಮಾತ್ರವಲ್ಲದೆ ಸಾಹಿತ್ಯಿಕ, ಶೈಕ್ಷಣಿಕ ಹಾಗೂ ಧಾರ್ಮಿಕವಾಗಿ ಸಮಾಜ ಸುಧಾರಣೆಗೆ ಮಾದರಿಯಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅವರು ಸೋಮವಾರ ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ಶಿವಶರಣ ಹಡಪದ ಅಪ್ಪಣ್ಣರವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಪ್ಪಣ್ಣರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ […]