ಬೀಚ್‌ಗಳ ಸಮಗ್ರ ಅಭಿವೃದ್ಧಿಯ ವಿಸ್ತೃತ ಯೋಜನೆಯಲ್ಲಿ ಪ್ರವಾಸಿಗರ ರಕ್ಷಣೆಗೆ ಆದ್ಯತೆ ನೀಡಿ:ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯ ಬೀಚ್‌ಗಳ ಸಮಗ್ರಅಭಿವೃದ್ಧಿಗಾಗಿ ವಿಸ್ತೃತ ಯೋಜನೆಯ ತಯಾರಿಯಲ್ಲಿ ಪ್ರವಾಸಿಗರ ಜೀವಹಾನಿ ಸಂಭವವನ್ನು ತಡೆಗಟ್ಟಲು ಒತ್ತು ನೀಡುವುದರೊಂದಿಗೆ, ಯೋಜನೆಯನ್ನು ರೂಪಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕಡಲತೀರಗಳಿಗೆ ದೇಶದ ನಾನಾ ಭಾಗಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಬೀಚ್‌ಗಳ ಸ್ಥಳೀಯ ಭೌಗೋಳಿಕ ಪ್ರದೇಶದ ಮಾಹಿತಿ ಕೊರತೆಯಿಂದ ಜೀವಹಾನಿಗಳು ಉಂಟಾಗುತ್ತವೆ. ಈ ಬಗ್ಗೆ ಪ್ರವಾಸಿಗರಿಗೆ […]