ಇಂದಿನಿಂದ ಉಡುಪಿ ಭಂಡಾರಕೇರಿ ಮಠದಲ್ಲಿ ಪ್ರೋಷ್ಠಪದಿ ಭಾಗವತ ಪ್ರವಚನ

ಉಡುಪಿ: ಉಡುಪಿ ರಥಬೀದಿಯಲ್ಲಿರುವ ಭಂಡಾರಕೇರಿ ಮಠದಲ್ಲಿ ಸೆ. 4ರಿಂದ 16ರವರೆಗೆ ಬೆಳಿಗ್ಗೆ 9 ರಿಂದ 12ರವರೆಗೆ ಪ್ರೋಷ್ಠಪದಿ ಭಾಗವತ ಪ್ರವಚನ ಏರ್ಪಡಿಸಲಾಗಿದೆ ಎಂದು ಭಂಡಾರಕೇರಿ ಮಠದ ಶ್ರಿ ವಿದ್ಯೇಶ ತೀರ್ಥ ಸ್ವಾಮೀಜಿ ತಿಳಿಸಿದರು. ಉಡುಪಿ ಭಂಡಾರಕೇರಿ ಮಠದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ. 4 ರಂದು ಬೆಳಗ್ಗೆ 9 ಗಂಟೆಗೆ ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಸೆ. 16ರಂದು ಸಾಯಂಕಾಲ 5 ಗಂಟೆಗೆ ಪ್ರೋಷ್ಠಪದಿ ಮಂಗಲ ಮಹೋತ್ಸವ ನಡೆಯಲಿದ್ದು, ಕೃಷ್ಣಾಪುರ ಶ್ರೀ ವಿದ್ಯಾಸಾಗರ […]