ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಪತ್ನಿ, ಪುತ್ರ ಸಹಿತ ಮೂವರಿಗೆ ಜೀವಿತಾವಧಿ ಜೈಲು ಶಿಕ್ಷೆ
ಉಡುಪಿ: ಕಳೆದ ಐದು ವರ್ಷಗಳ ಹಿಂದೆ ಉಡುಪಿ ಇಂದ್ರಾಳಿಯ ಮನೆಯಲ್ಲಿ ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಕೊಲೆಗೈದು ಹೋಮ ಕುಂಡದಲ್ಲಿ ಹಾಕಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಪತ್ನಿ, ಮಗ ಸಹಿತ ಮೂವರಿಗೆ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಿತಾವಧಿ ಜೈಲು ಶಿಕ್ಷೆ ವಿಧಿಸಿ ಇಂದು ಮಹತ್ವದ ತೀರ್ಪು ನೀಡಿದೆ. ಭಾಸ್ಕರ ಶೆಟ್ಟಿಯ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ಜ್ಯೋತಿಷಿ ನಿರಂಜನ್ ಭಟ್ ಶಿಕ್ಷೆಗೆ ಗುರಿಯಾದ ಆರೋಪಿಗಳು. ಸಾಕ್ಷ್ಯನಾಶ ಆರೋಪಿ ರಾಘವೇಂದ್ರನನ್ನು […]