ಉಡುಪಿ:ಜನನ, ಮರಣ ದಾಖಲೆಗಳ ಸಮರ್ಪಕ ನಿರ್ವಹಣೆಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ

ಉಡುಪಿ: ಸಾರ್ವಜನಿಕರಿಗೆ ಜನನ, ಮರಣ ದಾಖಲೆಗಳು ತಮ್ಮ ಶೈಕ್ಷಣಿಕ ಹಾಗೂ ಆರ್ಥಿಕ ವ್ಯವಹಾರಗಳು ಸೇರಿದಂತೆ ಮತ್ತಿತರ ಕೆಲಸ ಕಾರ್ಯಗಳಿಗೆ ಅತ್ಯವಶ್ಯಕ. ಇವುಗಳ ನಿರ್ವಹಣೆ ಸಮರ್ಪಕವಾಗಿ ಮಾಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜನನ-ಮರಣ ಸಮನ್ವಯ ಸಮಿತಿಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರಕಾರ ನಾಗರಿಕ ನೋಂದಣಿ ಪದ್ಧತಿಯಲ್ಲಿ ಪ್ರತಿಯೊಬ್ಬ ನಾಗರಿಕರ ಜನನ, ಮರಣ ಹಾಗೂ ನಿರ್ಜೀವ ಜನನಗಳನ್ನು ಕಡ್ಡಾಯವಾಗಿ […]