ಮುಖ್ಯಮಂತ್ರಿಗಳೇ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನ್ನು ಹುಡುಕಿ ಜಿಲ್ಲೆಗೆ ಕಳುಹಿಸಿಕೊಡಿ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ತಾಂಡವಾಡುತ್ತಿರುವ ಜಲ್ವಂತ ಸಮಸ್ಯೆಯನ್ನು ಅರಿತುಕೊಂಡು ಪರಿಹರಿಸಬೇಕಾದ ಜಿಲ್ಲೆಯ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾಣೆಯಾಗಿದ್ದಾರೆ. ಮುಖ್ಯಮಂತ್ರಿಗಳು ಜಿಲ್ಲಾ ಉಸ್ತುವಾರಿ ಸಚಿವರನ್ನು ಹುಡುಕಿ ತಕ್ಷಣವೇ ಉಡುಪಿಗೆ ಕಳುಹಿಸಿಕೊಟ್ಟು, ಇಲ್ಲಿನ ಸಮಸ್ಯೆಗಳನ್ನು ಪರಿಹರಿಸುವಂತೆ ಮಾಡಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಎಲ್ಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾಲೂಕು ಕಚೇರಿ ಮುಂಭಾಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಕಾಣೆಯಾಗಿರುವ ವಿಚಾರವಾಗಿ ಜನಾಂದೋಲನ ನಡೆಸಲಾಗುವುದು ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಉಡುಪಿ ಜಿಲ್ಲಾಧ್ಯಕ್ಷ ವಿಜಯ ಕೊಡವೂರು ತಿಳಿಸಿದರು. ಈ ಕುರಿತು […]