ಉಡುಪಿ ಬಿಜೆಪಿ ಮುಖಂಡನ ಪತ್ನಿಯ ಸಾವು ಪ್ರಕರಣ: ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಆರೋಪಿಸಿ ಪ್ರತಿಭಟನೆ

ಉಡುಪಿ: ಉಡುಪಿ ಇಂದಿರಾ ನಗರದ ನಿವಾಸಿ, ಬಿಜೆಪಿ ಯುವ ಮೋರ್ಚಾದ ಉಡುಪಿ ನಗರ ಉಪಾಧ್ಯಕ್ಷ ಶಿವಪ್ರಸಾದ್ ಅವರ ಪತ್ನಿ ರಕ್ಷಾ (26) ಎಂಬುವವರು ಶುಕ್ರವಾರ ಮೃತಪಟ್ಟಿದ್ದು, ಅವರ ಸಾವಿಗೆ ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಉಡುಪಿ ಜಿಲ್ಲಾಸ್ಪತ್ರೆಯ ಶವಗಾರದ ಮುಂದೆ ಇಂದು ಕುಟುಂಬಸ್ಥರು ಹಾಗೂ ಸ್ಥಳೀಯರು ಪ್ರತಿಭಟನೆ ನಡೆಸಿದರು. ಮೃತ ರಕ್ಷಾ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಸರ್ಕಾರಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಆದರೆ ಕುಟುಂಬಸ್ಥರು ಪಾಸಿಟಿವ್ ವರದಿ ಬಂದಿದ್ದರೂ ಮೃತ […]