ಆಗಸ್ಟ್ 5ರಂದು ಉಡುಪಿ ಬಿಜೆಪಿ ಕಚೇರಿಯಲ್ಲಿ ಮನ್ವಂತರ ಕಾರ್ಯಕ್ರಮ
ಉಡುಪಿ: ರಾಮಮಂದಿರ ನಿರ್ಮಾಣದ ಭೂಮಿಪೂಜೆ ಹಿನ್ನೆಲೆಯಲ್ಲಿ ಉಡುಪಿ ನಗರ ಬಿಜೆಪಿ ಆಶ್ರಯದಲ್ಲಿ ಮಹಿಳಾ ಮೋರ್ಚಾದ ಸಹಭಾಗಿತ್ವದಲ್ಲಿ ಆಗಸ್ಟ್ 5 ರಂದು ಬೆಳಿಗ್ಗೆ 11.30ಕ್ಕೆ ಉಡುಪಿ ಬಿಜೆಪಿ ಕಚೇರಿಯಲ್ಲಿ ಸಾಮಾಜಿಕ ಜಾಲತಾಣದ ಮೂಲಕ ‘ಮನ್ವಂತರ’ ರಂಗೋಲಿ ಸ್ಪರ್ಧೆ, ಭಜನೆ, ರಾಮರಕ್ಷಾಸ್ತೋತ್ರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪಕ್ಷದ ಎಲ್ಲ ಪ್ರಮುಖರು, ಸ್ಥಳೀಯ ಸಂಸ್ಥೆಯ ಜನಪ್ರತಿನಿಧಿಗಳು, ಎಲ್ಲ ಮೋರ್ಚಾಗಳ ಅಧ್ಯಕ್ಷರು, ಎಲ್ಲ ಪ್ರಕೋಷ್ಠಗಳ ಸಂಚಾಲಕರು ಹಾಗೂ ಕಾರ್ಯಕರ್ತರು ಭಾಗವಹಿಸಬೇಕೆಂದು ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.