ಉಡುಪಿ: ಐವನ್ ಡಿಸೋಜ ಪ್ರಚೋದನಾಕಾರಿ ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನಾ ಮೆರವಣಿಗೆ
ಉಡುಪಿ: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಪ್ರಚೋದನಾಕಾರಿ ಹೇಳಿಕೆ ಖಂಡಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚಾದ ನೇತೃತ್ವದಲ್ಲಿ ಇಂದು ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಬನ್ನಂಜೆ ಶ್ರೀ ನಾರಾಯಣಗುರು ವೃತ್ತದಿಂದ ಆರಂಭಗೊಂಡ ಮೆರವಣಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯವರೆಗೆ ಸಾಗಿಬಂತು. ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಹತ್ತಾರು ಬಿಜೆಪಿ ಕಾರ್ಯಕರ್ತರು ಮೆರವಣಿಗೆಯುದ್ಧಕ್ಕೂ ಐವನ್ ಡಿಸೋಜ ಹಾಗೂ ಕಾಂಗ್ರೆಸ್ ವಿರುದ್ಧ ದಿಕ್ಕಾರ ಕೂಗಿದರು. ಐವನ್ ಡಿಸೋಜ ವಿರುದ್ಧ ತಕ್ಷಣವೇ ಎಫ್ಐಆರ್ ದಾಖಲಿಸಿ, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. […]