Tag: #udupi #bjp #state #karnataka
-
ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಜಾರಿಗೆ ಮೀನಾಮೇಷ ಮಾಡುತ್ತಿರುವುದು ಸರಿಯಲ್ಲ : ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ
ಉಡುಪಿ: ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಜಾರಿಗೊಳಿಸುವಲ್ಲಿ ಮೀನಾಮೇಷ ಮಾಡುತ್ತಿರುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಉಪಾಧ್ಯಕ್ಷೆ ನಯನಾ ಗಣೇಶ್ ಖಂಡಿಸಿದ್ದಾರೆ. ರಾಜ್ಯದ ಜನರಿಗೆ ಗ್ಯಾರಂಟಿ ಕಾರ್ಡ್ ತೋರಿಸಿ ಪ್ರಚಾರ ಮಾಡಿದ ಕಾಂಗ್ರೆಸ್ ನಾಯಕರು ಇದೀಗ ಅಕ್ಕಿ ವಿತರಣೆ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಆರೋಪಿಸುವ ಮೂಲಕ ತಮ್ಮ ಗ್ಯಾರಂಟಿಯಿಂದ ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಗೃಹ ಲಕ್ಷ್ಮಿ ಯೋಜನೆಯನ್ನು ಸರ್ಕಾರ ಮುಂದೂಡಿದ್ದು, ಪೂರ್ವ ತಯಾರಿಯಿಲ್ಲದೇ ಜನರ ಕಣ್ಣಿಗೆ ಮಣ್ಣೆರೆಚುವ ಕೆಲಸ ಮಾಡುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. 200 ಯೂನಿಟ್ ವಿದ್ಯುತ್ ಉಚಿತ ಘೋಷಿಸಿ…