ನಾಳೆ (ಅ.15) ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉಡುಪಿಗೆ – ‘ಜಿಲ್ಲಾ ಜನಪ್ರತಿನಿಧಿಗಳ ಸಮಾವೇಶ’ದಲ್ಲಿ ಭಾಗಿ; ಕಿಶೋರ್ ಕುಮಾರ್ ಕುಂದಾಪುರ
ಉಡುಪಿ: ಅ.21ರಂದು ನಡೆಯಲಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಜನಪ್ರತಿನಿಧಿಗಳ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ‘ಜನಪ್ರತಿನಿಧಿಗಳ ಸಮಾವೇಶ’ವು ನಾಳೆ ಅ.15 ಮಂಗಳವಾರ ಮಧ್ಯಾಹ್ನ ಗಂಟೆ 3.00ಕ್ಕೆ ಉಡುಪಿ-ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನಡೆಯಲಿದೆ. ಈ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ವಿಧಾನ ಪರಿಷತ್ ಚುನಾವಣೆಯ […]