ನನ್ನ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ನೂರು ಕೇಸು ದಾಖಲಿಸಿದರೂ ಧೃತಿಗೆಡುವುದಿಲ್ಲ: ಶಾಸಕ ಯಶ್ಪಾಲ್ ಸುವರ್ಣ
ಉಡುಪಿ: ಶಿಕ್ಷಕರ ಪ್ರಶಸ್ತಿ ತಡೆ ಕುರಿತಾಗಿ ಪ್ರತಿಭಟನೆ ನಡೆಸಿದ ನನ್ನ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ನೂರು ಕೇಸು ದಾಖಲಿಸಿದರೂ ಧೃತಿಗೆಡುವ ಪ್ರಶ್ನೆಯೇ ಇಲ್ಲ ಎಂದು ಉಡುಪಿ ಶಾಸಕ ಯಶಪಾಲ್ ಎ ಸುವರ್ಣ ಪ್ರತಿಕ್ರಿಯಿಸಿದ್ದಾರೆ. ಉಡುಪಿ ಜಿಲ್ಲೆಯ ಶಿಕ್ಷಣ ವ್ಯವಸ್ಥೆ ವಿಶ್ವ ಮಾನ್ಯತೆ ಪಡೆದಿದ್ದು, ಜಿಲ್ಲೆಯ ಯುವ ಸಮುದಾಯವನ್ನು ದೇಶದ ಆಸ್ತಿಯನ್ನಾಗಿಸುವ ಶಿಕ್ಷಕರಿಗೆ ಮಾಡಿದ ಅಪಮಾನವನ್ನು ಸಹಿಸಲು ಸಾಧ್ಯವಿಲ್ಲ. ಮತೀಯ ಶಕ್ತಿಗಳ ಕುಮ್ಮಕ್ಕಿನಿಂದ ಶಿಕ್ಷಕ ಪ್ರಶಸ್ತಿಯನ್ನು ಹಿಂಪಡೆದು ಜಿಲ್ಲೆಯ ಶಿಕ್ಷಕರ ನೈತಿಕ ಸ್ಥೈರ್ಯ ಕುಗ್ಗಿಸಲು ಮುಂದಾದಾಗ ಜವಾಬ್ದಾರಿಯುತ […]