ಉಡುಪಿ: ಬಿಜೆಪಿ ‘ಜನಸೇವಕ ಸಮಾವೇಶ’ ಇಂದು
ಉಡುಪಿ: ರಾಜ್ಯ ಬಿಜೆಪಿಯ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಆಶ್ರಯದಲ್ಲಿ ಉಡುಪಿ ಜಿಲ್ಲಾಮಟ್ಟದ ‘ಜನಸೇವಕ ಸಮಾವೇಶ’ ಇಂದು (ಜ.12) ಬೆಳಿಗ್ಗೆ 10.30ಕ್ಕೆ ಉಡುಪಿಯ ಪುತ್ತೂರು-ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನಡೆಯಲಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜನಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಅರವಿಂದ ಲಿಂಬಾವಳಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿ ಕುಮಾರ್, ರಾಜ್ಯ ರೈತ ಮೋರ್ಚಾ […]