ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಉಡುಪಿ ಸರಕಾರಿ ಜಿಲ್ಲಾಸ್ಪತ್ರೆ ಇವರ ಸಹಯೋಗದಲ್ಲಿ ಅ 20 ರಂದು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರವು ನಡೆಯಿತು. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಆಯೋಜನೆಗೊಂಡ ಈ ರಕ್ತದಾನ ಶಿಬಿರವನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರು ಉದ್ಘಾಟಿಸಿ ಸಭೆಯನ್ನುದ್ದೇಶಿಸಿ ನವರಾತ್ರಿಯ‌ ಶುಭಾಶಯವನ್ನು ತಿಳಿಸಿ‌ ರಕ್ತದಾನ ಎಂಬ ಪುಣ್ಯದ ಕೆಲಸದಿಂದ ಹಲವರ ಜೀವ ಉಳಿಸಬಹುದು […]

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವಾರ್ಷಿಕ ಸಭೆ: ಚುನಾವಣಾ ಪೂರ್ವ ತಯಾರಿ ಕುರಿತು ಸಮಾಲೋಚನೆ

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ಕಾರ್ಯಕರ್ತರ ಮಾಸಿಕ ಸಭೆಯು ಅ.1 ಆದಿತ್ಯವಾರದಂದು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆಯಿತು. ಸಭೆಯಲ್ಲಿ ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಲೋಕಸಭೆ ಚುನಾವಣೆ ದೃಷ್ಟಿಯಲ್ಲಿ ಪಕ್ಷ ಸಂಘಟನೆ ಮತ್ತು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಬೂತ್ ಸಮಿತಿ ರಚನೆಯ ಕುರಿತು ಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ನಾಯಕರು ಹಾಗೂ ಕಾರ್ಯಕರ್ತರು ತಮ್ಮ ಸಲಹೆ-ಸೂಚನೆಯನ್ನು ನೀಡಿದರು. […]

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಚುನಾವಣೆಯ ಪೂರ್ವ ತಯಾರಿ ಸಭೆ

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ವ ತಯಾರಿಯ ಬಗ್ಗೆ ಚರ್ಚಿಸಲು ಮಂಗಳವಾರದಂದು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ‌ ಸಭೆ ನಡೆಯಿತು. ಉಡುಪಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಎಲ್ಲಾ ವಾರ್ಡ್‌ ಹಾಗೂ ಪಂಚಾಯತ್‌ ಗಳಿಗೆ ಉಸ್ತುವಾರಿಗಳ ನೇಮಕ ಮಾಡುವ ಬಗ್ಗೆ ಮತ್ತು ಪ್ರತಿ ವಾರ್ಡಿನಲ್ಲಿ ಸಭೆಯನ್ನು ನಡೆಸುವುದರ ಬಗ್ಗೆ ತೀರ್ಮಾನಿಸಲಾಯಿತು. ಸದಸ್ಯರು ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಉಡುಪಿ ಜಿಲ್ಲಾ […]

ಉಡುಪಿ: ಫೆ. 21 ರಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಬೂತ್ ಅಧ್ಯಕ್ಷರ ಸಭೆ

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 226 ಬೂತ್‌ಗಳಿದ್ದು, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಸುಮಾರು 132 ಬೂತ್‌ಗಳಿವೆ. ಈ 132 ಬೂತ್‌ಗಳಿಗೆ ಬೂತ್ ಲೆವೆಲ್ ಏಜೆಂಟ್-2 (B.L.A-2) ಈಗಾಗಲೇ ಆಯ್ಕೆಯಾಗಿದ್ದು 132 ಬೂತ್‌ಗಳ B.L.A-2 ಮತ್ತು ಬೂತ್ ಅಧ್ಯಕ್ಷರ ಸಭೆಯನ್ನು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಫೆ. 21 ರಂದು ಸಂಜೆ 3.00 ಗಂಟೆಗೆ ಕರೆಯಲಾಗಿದೆ. ಈ ಸಭೆಯಲ್ಲಿ ಲೋಕಸಭಾ ಸದಸ್ಯ, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಸ್ತುವಾರಿ ಪ್ರತಾಪನ್ನ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, […]