ಬಸ್ ಟಿಕೆಟ್ ದರ ಏರಿಸುವ ಮೂಲಕ ಜನಸಾಮಾನ್ಯರ ಸುಲಿಗೆ: ಉಡುಪಿ ಬ್ಲಾಕ್ ಕಾಂಗ್ರೆಸ್ ಖಂಡನೆ

ಉಡುಪಿ: ಕೋವಿಡ್-19 ಮೊದಲ ಲಾಕ್ ಡೌನ್ ಬಳಿಕ ಖಾಸಗಿ ಬಸ್ ಟಿಕೆಟ್ ದರವನ್ನು ಶೇ. 15ರಷ್ಟು ಹೆಚ್ಚಿಸಲಾಗಿತ್ತು. ಲಾಕ್‌ಡೌನ್ ಸಡಿಲಿಕೆ ಆದರೂ ಇಂಧನ ಬೆಲೆ ಏರಿಕೆಯ ನೆಪವೊಡ್ಡಿ ಟಿಕೆಟ್ ದರವನ್ನು ಇಳಿಕೆ ಮಾಡಲಿಲ್ಲ. ಇದೀಗ ಕೋವಿಡ್ 19 ಎರಡನೇ ಅಲೆಯ ಲಾಕ್‌ಡೌನ್ ಸಡಿಲಿಕೆ ಆಗಿದ್ದು, ಬಸ್ ಟಿಕೆಟ್ ದರವನ್ನು ಶೇ.25ರಷ್ಟು ಹೆಚ್ಚಿಸಲು ಸರಕಾರ ಅನುಮತಿ‌ ನೀಡಿದೆ. ಆ ಮೂಲಕ ಸರ್ಕಾರ ಕೊರೊನಾ ಸಂಕಷ್ಟ ಕಾಲದಲ್ಲೂ ಜನಸಾಮಾನ್ಯರನ್ನು ಸುಲಿಗೆ ಮಾಡುವ ಕೆಲಸ ಮಾಡುತ್ತಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ […]