ಕಾಂಗ್ರೆಸ್ ಎರಡನೇ ಪಟ್ಟಿ ರಿಲೀಸ್: ಉಡುಪಿ ಸೇರಿ 42 ಕ್ಷೇತ್ರಗಳಿಗೆ ಟಿಕೆಟ್ ಫೈನಲ್
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷವು ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದ ಕಾಂಗ್ರೆಸ್ ಹೈಕಮಾಂಡ್,ಇಂದು 42 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಬಹುದಿನಗಳಿಂದ ವಿಳಂಬವಾಗಿದ್ದ ಕಾಂಗ್ರೆಸ್ ಪಕ್ಷದ ಎರಡನೇ ಪಟ್ಟಿಯಲ್ಲಿ ಗುರುವಾರ ಅಂತಿಮವಾಗಿ ಬಿಡುಗಡೆ ಮಾಡಲಾಗಿದ್ದು, ಯುವ ಮುಖಂಡ ಪ್ರಸಾದ್ ರಾಜ್ ಕಾಂಚನ್ ಅವರಿಗೆ ಉಡುಪಿ ಕ್ಷೇತ್ರದಿಂದ ಸ್ಪರ್ಧಿಸಲು ಚುನಾವಣಾ ಟಿಕೆಟ್ ನೀಡಲಾಗಿದೆ. ನಿರೀಕ್ಷೆಯಂತೆ ಕಾಂಗ್ರೆಸ್ ಮೊಗವೀರ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡಿದೆ.. ಉಳಿದ ಕ್ಷೇತ್ರಗಳಿಗೆ ಹಂತ ಹಂತವಾಗಿ […]
ದಿ. ಆಸ್ಕರ್ ಫರ್ನಾಂಡಿಸ್ ಅವರ 82ನೇ ಹುಟ್ಟು ಹಬ್ಬದ ಸ್ಮರಣಾರ್ಥ ವಸತಿ ನಿಲಯಗಳಿಗೆ ಅಗತ್ಯ ವಸ್ತು ವಿತರಣೆ
ಉಡುಪಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ದಿ. ಆಸ್ಕರ್ ಫರ್ನಾಂಡಿಸ್ ಅವರ 82ನೇ ಹುಟ್ಟು ಹಬ್ಬದ ಸ್ಮರಣಾರ್ಥ ಮಿಷನ್ ಕಾಂಪೌಂಡ್‌ನ ಸಿ.ಎಸ್.ಐ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲುಗಳನ್ನು ಹಾಗೂ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಏ ಗಫೂರ್ ಮಾತನಾಡಿ, ಆಸ್ಕರ್ ಫರ್ನಾಂಡಿಸ್ ಅವರು ನಡೆದು ಬಂದ ದಾರಿ ಮತ್ತು ಅವರ ಆದರ್ಶಗಳನ್ನು ವಿವರಿಸಿದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಮಾತನಾಡಿ […]
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದ ಪ್ರಜಾಧ್ವನಿ ಬಸ್ ಯಾತ್ರೆ ಕುರಿತು ಪೂರ್ವಭಾವಿ ಸಭೆ
ಉಡುಪಿ: ಜ.22 ಆದಿತ್ಯವಾರದಂದು ಬೆಳಿಗ್ಗೆ 10.00 ಗಂಟಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಷ್ಟ್ರ ಮತ್ತು ರಾಜ್ಯಮಟ್ಟದ ನಾಯಕರ ಉಪಸ್ಥಿತಿಯಲ್ಲಿ ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯದ ವಿರುದ್ಧ ಉಡುಪಿಯ ಕ್ರಿಶ್ಚಿಯನ್ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ “ಪ್ರಜಾಧ್ವನಿ ಯಾತ್ರೆ” ಬೃಹತ್ ಸಮಾವೇಶವು ನಡೆಯಲಿದ್ದು, ಈ ಬೃಹತ್ ಸಮಾವೇಶದ ರೂಪುರೇಷೆಯ ಬಗ್ಗೆ ಮಾಹಿತಿ ನೀಡಲು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಪೂರ್ವಭಾವಿ ಸಭೆಯನ್ನು ಜ.14 […]
ಉಡುಪಿ ಬ್ಲಾಕ್ ಕಾಂಗ್ರೆಸ್‌ನಿಂದ ಸರ್ವ ಧರ್ಮ ದೀಪಾವಳಿ
ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಅಮೆರಿಕಾದ ವೈಟ್‌ಹೌಸ್‌ನಲ್ಲಿ ಆಚರಿಸಲ್ಪಡುವ ಹಬ್ಬ, ಬ್ರಿಟನ್ ಪ್ರಧಾನಿ ಆಚರಿಸುವ ಹಬ್ಬ ದೀಪಾವಳಿ ಕೇವಲ ಹಿಂದುಗಳ ಹಬ್ಬ ಆಗಿ ಉಳಿದಿಲ್ಲ. ಭಾರತೀಯರ ದೀಪಾವಳಿ ಇದೀಗ ವಿಶ್ವವ್ಯಾಪಿಯಾಗಿದೆ ಎಂದರು. ದೀಪಾವಳಿಯನ್ನು ಸರ್ವ ಧರ್ಮೀಯರ ಪಾಲ್ಗೊಳ್ಳುವಿಕೆಯಲ್ಲಿ, ಪ್ರಪ್ರಥಮ ಬಾರಿಗೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಆಯೋಜಿಸಿರುವುದಕ್ಕೆ ಅಧ್ಯಕ್ಷ ರಮೇಶ್ ಕಾಂಚನ್ ಅವರನ್ನು […]