ಉಡುಪಿ: ಗಾಂಧಿ ಆಸ್ಪತ್ರೆಗೆ 30ರ ಸಡಗರ; ಸ್ವಯಂಪ್ರೇರಿತ ರಕ್ತದಾನ ಶಿಬಿರ

ಉಡುಪಿ: ಸಿಟಿ ಬಸ್ ನಿಲ್ದಾಣದ ಬಳಿಯ ಗಾಂಧಿ ಆಸ್ಪತ್ರೆಗೆ 30ವರ್ಷ ಸಂಭ್ರಮದ ಹಿನ್ನೆಲೆಯಲ್ಲಿ ಅಜ್ಜರಕಾಡುಜಿಲ್ಲಾ ಸರಕಾರಿ ಆಸ್ಪತ್ರೆಯ ಜಿಲ್ಲಾ ರಕ್ತ ನಿಧಿ ಕೇಂದ್ರದ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತ ದಾನ ಶಿಬಿರವು ಆಸ್ಪತ್ರೆಯ ಲಹರಿ ಸಭಾಂಗಣದಲ್ಲಿ ಭಾನುವಾರ ನಡೆಯಿತು. ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ್ ಪೂಜಾರಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ಸಮಾಜದಿಂದ ಪಡೆದುದನ್ನು ಸಮಾಜಕ್ಕೆ ಹಂಚುವ ಕೆಲಸವನ್ನು ಗಾಂಧಿ ಆಸ್ಪತ್ರೆ ಮಾಡುತ್ತಿದೆ. ನಗರಸಭೆ ಜತೆ ಗಾಂಧಿ ಆಸ್ಪತ್ರೆ ಕೈಜೋಡಿಸಿದ್ದು ಎಂ.ಹರಿಶ್ಚಂದ್ರರ ಸಾಮಾಜಿಕ ಕಳಕಳಿ […]