ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ಶ್ರಮಿಸಿ: ಸಚಿವ ಬೊಮ್ಮಾಯಿ
ಉಡುಪಿ,: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಲಭ್ಯವಿರುವ ಸಂಪನ್ಮೂಲಗಳ ಸಮರ್ಪಕ ಬಳಕೆ ಆಗಬೇಕು. ಈ ನಿಟ್ಟಿನಲ್ಲಿ ಉಡುಪಿ ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸುವ ಸಲುವಾಗಿ ಉಡುಪಿ ಜಿಲ್ಲಾ ಟೂರಿಸಂ ಟಾಸ್ಕ್ ಫೋರ್ಸ್‍ನ್ನು ರಚನೆ ಮಾಡುವ ನಿರ್ಣಯವನ್ನು ಶುಕ್ರವಾರ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೈಗೊಳ್ಳಲಾಯಿತು. ಉಡುಪಿ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗೃಹ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡುತ್ತಾ, ಜಿಲ್ಲೆಗೆ ಒಂದು ವಿಶೇಷವಾದ ಟೂರಿಸಂ […]