ಉಡುಪಿ:ಪುಸ್ತಕ ಬಹುಮಾನ : ಜಾನಪದ ಕೃತಿ ಆಹ್ವಾನ

ಉಡುಪಿ: ಕರ್ನಾಟಕ ಜಾನಪದ ಅಕಾಡೆಮಿಯ ವತಿಯಿಂದ 2024 ನೇ ಸಾಲಿನಲ್ಲಿ ಜನವರಿ 1 ರಿಂದ ಡಿಸೆಂಬರ್ 31ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಠ 150 ಪುಟಗಳಿಗೂ ಮೇಲ್ಪಟ್ಟಿರುವಂತೆ, ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ ಹಾಗೂ ಜನಪದ ಸಂಕೀರ್ಣ ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಲೇಖಕರು, ಪ್ರಕಾಶಕರು, […]