ಬಿಪಿಎಲ್, ಅಂತ್ಯೋದಯ ಕಾರ್ಡ್ ರದ್ದುಗೊಳಿಸಲು ಹೊರಟಿರುವ ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟ
ಉಡುಪಿ: ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ 22 ಲಕ್ಷ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಗಳನ್ನು ರದ್ದು ಮಾಡಲು ಹೊರಟಿದೆ. ಸರಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಹಿಂದುಳಿದ ಮೋರ್ಚಾದ ಉಡುಪಿ ಜಿಲ್ಲಾಧ್ಯಕ್ಷ ವಿಜಯ್ ಕೊಡವೂರು ಹೇಳಿದರು. ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ಜಿಲ್ಲೆಯಲ್ಲಿ ಈಗಾಗಲೇ 40 ಸಾವಿರ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಗಳನ್ನು ರದ್ದುಗೊಳಿಸಲಾಗಿದೆ. ಇನ್ನು 40 ಸಾವಿರ ಕಾರ್ಡ್ ಗಳನ್ನು ರದ್ದುಗೊಳಿಸಲು […]