ಉಡುಪಿ: ನಾಳೆ ಕರಂಬಳ್ಳಿ ವೆಂಕಟರಮಣ ದೇಗುಲದ ಬ್ರಹ್ಮಕಲಶೋತ್ಸವ; ಮುಖ್ಯಮಂತ್ರಿ ಭೇಟಿ

ಉಡುಪಿ: ಇತಿಹಾಸ ಪ್ರಸಿದ್ಧ ಉಡುಪಿ ತಾಲ್ಲೂಕಿನ ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ನಾಳೆ (ಜ. 18) ನಡೆಯಲಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಭಾಗವಹಿಸಲಿದ್ದಾರೆ ಎಂದು ದೇವಳದ ಆಡಳಿತ ಮೊಕ್ತೇಸರ ಹಾಗೂ ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ. ದೇಗುಲದದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 5.30ಕ್ಕೆ ಧರ್ಮಸಭೆ ನಡೆಯಲಿದೆ. ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು, ಆಶೀರ್ವಚನ ನೀಡಲಿದ್ದಾರೆ. ದೇವಳದ ತಂತ್ರಿ ಪಾಡಿಗಾರು ವಾಸುದೇವ ತಂತ್ರಿ ಶುಭಸಂದೇಶ ನೀಡುವರು. ಧಾರ್ಮಿಕ […]