ಉಡುಪಿ: ಏ.2ರಿಂದ 10ರ ವರೆಗೆ ಕನ್ನರ್ಪಾಡಿ ಜಯದುರ್ಗಾಪರಮೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಉಡುಪಿ: ಇಲ್ಲಿನ ಇತಿಹಾಸ ಪ್ರಸಿದ್ಧ ಕನ್ನರ್ಪಾಡಿ ಶ್ರೀ ಜಯದುರ್ಗಾಪರಮೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವವು ಏಪ್ರಿಲ್ 2 ರಿಂದ 10ರ ವರೆಗೆ ದೇವಸ್ಥಾನದ ಸನ್ನಿಧಿಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ಉಡುಪಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರೂ ಆಗಿರುವ ಜೀರ್ಣೋದ್ಧಾರ ಸಮಿತಿಯ ಕೋಶಾಧಿಕಾರಿ ಕೆ. ಕೃಷ್ಣಮೂರ್ತಿ ಆಚಾರ್ಯ ಮಾಹಿತಿ ನೀಡಿದರು. ಪುತ್ತೂರು ಶ್ರೀಶ ತಂತ್ರಿಗಳ ನೇತೃತ್ವದಲ್ಲಿ ಶ್ರೀದೇವಿಗೆ ಬ್ರಹ್ಮಕಲಶಾಭಿಷೇಕ ಸಹಿತ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಲಿವೆ. ಏ.2 ರಂದು ಬೆಳಿಗ್ಗೆ ತೋರಣ ಮುಹೂರ್ತ, ಉಗ್ರಾಣ […]