ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಹಾಗೂ ಶ್ರೀ ಕೃಷ್ಣ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಜಿಲ್ಲಾ ಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ರವರ ಜಯಂತಿ ಆಗಸ್ಟ್ 20 ರಂದು ಹಾಗೂ ಶ್ರೀ ಕೃಷ್ಣ ಜಯಂತಿಯನ್ನು ಆಗಸ್ಟ್ 26 ರಂದು ಸಂಭ್ರಮ ಹಾಗೂ ವಿಜೃಂಭಣೆಯಿAದ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಶನಿವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಶ್ರೀಕೃಷ್ಣ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. […]