ಲಂಚ ಸ್ವೀಕರಿಸುತ್ತಿದ್ದಾಗ ಉಪ್ಪೂರು ಪಿಡಿಒ, ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ಉಡುಪಿ: ಭೂಮಿಯ 9 ಮತ್ತು 11 ದಾಖಲೆ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಇನಾಯತ್ ಉಲ್ಲಾ ಬೇಗ್ ಹಾಗೂ ಬಿಲ್ ಕಲೆಕ್ಟರ್ ಸಂಜಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರವಿ ಡಿಲಿಮಾ ಅವರಿಂದ 13,300 ರೂ. ಪಡೆಯುತ್ತಿದ್ದಾಗ ಈ ಕಾರ್ಯಾಚರಣೆ ನಡೆದಿದೆ. ಲೋಕಾಯುಕ್ತ ಎಸ್‌ಪಿ ನಟರಾಜ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಕೆ.ಸಿ. ಪ್ರಕಾಶ್ ಅವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್, ರಫೀಕ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಇಬ್ಬರಿಗೂ ಜೂನ್ 12ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.